ಉಡುಪಿ ಜಿಲ್ಲೆಯ ಏಳು ಮಂದಿಗೆ ಕೋವಿಡ್ ಸೋಂಕು
ಉಡುಪಿ, ಜ.20: ಬುಧವಾರ ಉಡುಪಿ ಜಿಲ್ಲೆಯ ಏಳು ಮಂದಿ ಪುರುಷರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ನಾಲ್ವರು ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 30 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ಆರು ಮಂದಿ ಉಡುಪಿ ತಾಲೂಕಿನವ ರಾದರೆ ಒಬ್ಬರು ಹೊರಜಿಲ್ಲೆಯಿಂದ ಚಿಕಿತ್ಸೆಗೆಂದು ಬಂದವರಾಗಿದ್ದಾರೆ. ಇಂದು ಮೂವರು ಹೋಮ್ ಐಸೋಲೇಷನ್, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಮಂಗಳವಾರ ನಾಲ್ವರು ಚಿಕಿತ್ಸೆ ಬಳಿಕ ಸೋಂಕಿನಿಂದ ಮುಕ್ತಿ ಪಡೆದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಮುಕ್ತಿ ಪಡೆದವರ ಒಟ್ಟು ಸಂಖ್ಯೆ ಈಗ 23,015ಕ್ಕೇರಿದೆ.
765 ಮಂದಿ ನೆಗೆಟಿವ್: ಮಂಗಳವಾರ ಜಿಲ್ಲೆಯ 775 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 765 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. 10 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,234 ಎಂದವರು ತಿಳಿಸಿದರು.
ಮಂಗಳವಾರ ಜಿಲ್ಲೆಯ 775 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 765 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. 10 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,234 ಎಂದವರು ತಿಳಿಸಿದರು. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,24,828 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,01,594 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್ಗೆ ಯಾರೂ ಬಲಿಯಾಗಿಲ್ಲ. ಕೋವಿಡ್ಗೆ ಮೃತರ ಸಂಖ್ಯೆ 189 ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.