ದ.ಕ.ಜಿಲ್ಲೆ : ಕೋವಿಡ್ಗೆ ಓರ್ವ ಬಲಿ; 12 ಮಂದಿಗೆ ಸೋಂಕು
ಮಂಗಳೂರು, ಜ. 22 : ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಓರ್ವ ಬಲಿಯಾಗಿದ್ದು, 12 ಮಂದಿಗೆ ಸೋಂಕು ತಗುಲಿದೆ. ಈ ನಡುವೆ ಶುಕ್ರವಾರ 28 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,530 ಸೋಂಕಿತರ ಪೈಕಿ 32,540 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 738 ಮಂದಿ ಮೃತಪಟ್ಟಿದ್ದು, 252 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 26,415 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 27,70,435 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story