ಮಂಗಳೂರು: ವೇಶ್ಯಾವಾಟಿಕೆ ಆರೋಪ; ಇಬ್ಬರ ಬಂಧನ
ಮಂಗಳೂರು, ಜ.24: ನಗರದ ಅತ್ತಾವರ ಬಳಿಯ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿ, ಮಹಿಳೆಯರನ್ನು ರಕ್ಷಿಸಿದ್ದಾರೆ.
ವಸತಿಗೃಹದ ಮ್ಯಾನೇಜರ್ ಚಂದ್ರಶೇಖರ್ ಮತ್ತು ರೂಮ್ಬಾಯ್ ಹರೀಶ್ ಪೂಜಾರಿ ಬಂಧಿತ ಆರೋಪಿಗಳು.
ನಗರದ ಅತ್ತಾವರ ಬಳಿ ಇರುವ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಗಿರಾಕಿಗಳನ್ನು ವಶಕ್ಕೆ ಪಡೆದು ವಿಚಾರಿಸಿದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story