ಉಡುಪಿ : ಸೋಮವಾರ ನಾಲ್ವರಲ್ಲಿ ಕೋವಿಡ್ ಸೋಂಕು ಪತ್ತೆ
ಉಡುಪಿ, ಜ.25: ಸೋಮವಾರ ಜಿಲ್ಲೆಯ ನಾಲ್ವರಲ್ಲಿ ಮಾತ್ರ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ಏಳು ಮಂದಿ ಸೋಂಕಿನಿಂದ ಗುಣಮುಖ ರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 40ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ತಲಾ ಇಬ್ಬರು ಪುರುಷರು ಹಾಗೂ ಮಹಿಳೆಯರು. ಇವರಲ್ಲಿ ಇಬ್ಬರು ಉಡುಪಿ ತಾಲೂಕಿನವರಾದರೆ ಒಬ್ಬರು ಕುಂದಾಪುರ ತಾಲೂಕಿನವರು. ಉಳಿದೊಬ್ಬರು ಹೊರಜಿಲ್ಲೆಯಿಂದ ಚಿಕಿತ್ಸೆಗೆ ಬಂದವರು. ರವಿವಾರ ಏಳು ಮಂದಿ ಸೋಂಕಿನಿಂದ ಮುಕ್ತರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಒಟ್ಟು ಸಂಖ್ಯೆ ಈಗ 23,046ಕ್ಕೇರಿದೆ.
744 ಮಂದಿ ನೆಗೆಟಿವ್: ರವಿವಾರ ಜಿಲ್ಲೆಯ 747 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 744 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ ಮೂವರಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,275ಕೆ್ಕೀರಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,29,707 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,06,432 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್ಗೆ ಯಾರೂ ಬಲಿಯಾಗಿಲ್ಲ. ಹೀಗಾಗಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 189 ಮಾತ್ರ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.