ಬೆಳ್ತಂಗಡಿ: ಬಂಗಾರ ಪಲ್ಕೆ ಜಲಪಾತದಿಂದ ಬಿದ್ದು ಯುವಕ ನಾಪತ್ತೆ
ಸಾಂದರ್ಭಿಕ ಚಿತ್ರ
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತಕ್ಕೆ ತೆರಳಿದ್ದ ಉಜಿರೆ ಮೂಲದ ಯುವಕ ಮಣ್ಣಿನಡಿ ಸಿಲುಕಿ ನಾಪತ್ತೆಯಾದ ಘಟನೆ ನಡೆದಿದೆ.
ಉಜಿರೆಯ ನಾಲ್ವರು ಯುವಕರು ಜಲಪಾತದಲ್ಲಿ ಇರುವ ಸಮಯ ಜಲಪಾತದ ಅಂಚಿನ ಗುಡ್ಡ ದಿಢೀರನೆ ಕುಸಿತ ಉಂಟಾಗಿ ಮೂವರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಓರ್ವ ಮಣ್ಣಿನಡಿಯಲ್ಲಿ ಸಿಲುಕಿ ಕಾಣೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕಾಶಿಬೆಟ್ಟು ನಿವಾಸಿ ಎಂದು ತಿಳಿದುಬಂದಿದೆ.
ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು. ಘಟನೆ ವಿಚಾರವಾಗಿ ಸ್ಥಳಕ್ಕೆ ಅಧಿಕಾರಿಗಳು, ಸ್ಥಳೀಯರು ತೆರಳಿದ್ದಾರೆ.
Next Story