ಕೊಣಾಜೆ: ಯುವತಿಗೆ ಕಿರುಕುಳ ಯತ್ನ ; ಆರೋಪಿ ಪೊಲೀಸ್ ವಶಕ್ಕೆ
ಕೊಣಾಜೆ: ಯುವತಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಬೋಳಿಯಾರು ಸಮೀಪದ ಯುವತಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಆಕೆಯನ್ನು ಚುಡಾಯಿಸಿ ಆರೋಪದಲ್ಲಿ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪಾಣೆಲ ನಿವಾಸಿ ಇರ್ಷಾದ್ (23) ಆರೋಪಿ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Next Story