ಉಡುಪಿ: ಬುಧವಾರ ಆರು ಮಂದಿಗೆ ಕೋವಿಡ್ ಸೋಂಕು
ಉಡುಪಿ, ಜ.27: ಜಿಲ್ಲೆಯ ಆರು ಮಂದಿಯಲ್ಲಿ ಬುಧವಾರ ಕೋವಿಡ್- 19ರ ಸೋಂಕು ಕಂಡುಬಂದಿದೆ. ದಿನದಲ್ಲಿ ಎಂಟು ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ38 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರಾದರೆ, ಉಳಿದಿಬ್ಬರು ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ ನಾಲ್ವರು ಹಾಗೂ ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ತಲಾ ಒಬ್ಬರಿದ್ದಾರೆ. ಮಂಗಳವಾರ ಎಂಟು ಮಂದಿ ಸೋಂಕಿನಿಂದ ಮುಕ್ತರಾ ಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಒಟ್ಟು ಸಂಖ್ಯೆ ಈಗ 23,061ಕ್ಕೇರಿದೆ.

786 ಮಂದಿ ನೆಗೆಟಿವ್: ಮಂಗಳವಾರ ಜಿಲ್ಲೆಯ 801 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 786 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ ಐದು ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,288 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,31,343 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,08,055 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೊೀವಿಡ್ಗೆ(ಒಟ್ಟು 189) ಯಾರೂ ಬಲಿಯಾಗಿಲ್ಲ.