ಬ್ಯಾರೀಸ್ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ
ಕುಂದಾಪುರ, ಜ.27: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ 2020-21ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಬಿದ್ಕಲಕಟ್ಟೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಕಿಣಿ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ವಿದ್ಯಾರ್ಥಿಗಳಲ್ಲಿ ಸಂಘಟನೆಯ ಪ್ರವೃತ್ತಿ ರೂಡಿಸಿಕೊಳ್ಳ ಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್ ಘಟಕದ ಶುಭ ಹಾರೈಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಕಾರ್ಯದರ್ಶಿ ಮುಹಮ್ಮದ್ ಅಯಾನ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಸಂದೀಪ ಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಮಿತಾ ವಂದಿಸಿದರು. ವಿದ್ಯಾರ್ಥಿನಿ ಕಾವ್ಯಾ ಕಾರ್ಯಕ್ರಮ ನಿರೂಪಿಸಿದರು.
Next Story