ಕಾಟಿಪಳ್ಳ : ಯುವಕನಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ
ಮಂಗಳೂರು : ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಯುವಕನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಹೊರವಲಯದ ಕಾಟಿಪಳ್ಳ ಸಮೀಪ ಬುಧವಾರ ತಡ ರಾತ್ರಿ ನಡೆದಿದೆ.
ಕೃಷ್ಣಾಪುರ ನಿವಾಸಿ ಜಾಬಿರ್ (20) ಚೂರಿ ಇರಿತಕ್ಕೆ ಒಳಗಾದವರು.
ಬುಧವಾರ ತಡರಾತ್ರಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜಾಬಿರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story