ಉಡುಪಿ: ದಿನದಲ್ಲಿ 1014 ಮಂದಿಗೆ ಕೋವಿಡ್ ಲಸಿಕೆ
ಉಡುಪಿ, ಜ. 28: ಗುರುವಾರ ಜಿಲ್ಲೆಯ ಒಟ್ಟು 16 ಕೇಂದ್ರಗಳಲ್ಲಿ ವೈದ್ಯರೂ ಸೇರಿದಂತೆ ನಿಗದಿತ 1600 ಆರೋಗ್ಯ ಕಾರ್ಯಕರ್ತ ರಲ್ಲಿ 1014 ಮಂದಿ ಕೊರೋನಾ ವಿರುದ್ಧದ ‘ಕೊವಿಶೀಲ್ಡ್’ ಲಸಿಕೆ ಪಡೆದಿದ್ದಾರೆ. ಇದು ದಿನದ ನಿಗದಿತ ಗುರಿಯ ಶೇ.63ರಷ್ಟು ಸಾಧನೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಕೋವಿಡ್ ವಿರುದ್ಧದ ವ್ಯಾಕ್ಸಿನೇಷನ್ನ ಮೊದಲ ಹಂತದಲ್ಲಿ ಜಿಲ್ಲೆಯ ಒಟ್ಟು 22,103 ಮಂದಿ ಕೊರೋನಾ ವಾರಿಯರ್ಸ್ಗೆ ಲಸಿಕೆ ನೀಡುವ ಗುರಿ ಇದೆ. ಇದುವರೆಗೆ ಲಸಿಕೆ ಪಡೆಯಬೇಕಿದ್ದ 18,449 ಮಂದಿಯಲ್ಲಿ 10,313 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಈ ಮೂಲಕ ಶೇ.56ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದವರು ವಿವರಿಸಿದರು.
Next Story