ಜ.31ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ
ಉಡುಪಿ, ಜ.28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ, ನಗರ ಭೂಸಾರಿಗೆ ನಿರ್ದೇಶನಾಲಯದ ಸಹಯೋಗದೊಂದಿಗೆ ನಿರ್ಮಿಸಿರುವ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಜ.31ರ ಬೆಳಗ್ಗೆ 10:30ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆಯಲಿದೆ.
ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಗೃಹ, ಕಾನೂನು ಮತ್ತು ಸಂಸದೀಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕ. ರಾ. ರ.ಸಾ. ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಸಹ ಭಾಗವಹಿಸಲಿದ್ದಾರೆ.
Next Story