ಕಲ್ಲಡ್ಕ: ರಸ್ತೆ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರ ಯುವಕ ಬಲಿ
ಬಂಟ್ವಾಳ, ಫೆ.7: ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕಲ್ಲಡ್ಕ ಪೇಟೆಯಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಕಲ್ಲಡ್ಕದ ಬಿ.ಕೆ. ನಗರ ನಿವಾಸಿ ಹಿಮಾದ್ ಮೃತಪಟ್ಟ ಯುವಕ.
ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬಂದ ಟ್ಯಾಂಕರ್ ಹಿಮಾದ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಹಿಮಾದ್ ಮೇಲೆಯೆ ಟ್ಯಾಂಕರ್ ಹರಿದಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಟ್ರಾಫಿಕ್ ಎಸ್ಸೈ ರಾಜೇಶ್ ಕೆ.ವಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story