ಅಡ್ಡಹೊಳೆ ಹೆದ್ದಾರಿಯಲ್ಲಿ ವಾಹನ ಅಪಘಾತ: ಮೂವರು ಮಕ್ಕಳ ಸಹಿತ ಐವರಿಗೆ ಗಾಯ
ನೆಲ್ಯಾಡಿ, ಫೆ.13: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರೊಂದರ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಐವರು ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಶನಿವಾರ ನಡೆದಿದೆ.
ಕೊಕ್ಕಡದ ಪಟ್ರಮೆ ನಿವಾಸಿಗಳಿದ್ದ ಕಾರು ಹಾಗೂ ಸರಕಾರಿ ಬಸ್ ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆಯಲ್ಲಿ ಮುಖಾಮುಖಿ ಢಿಕ್ಕಿಯಾಗಿದೆಯೆನ್ನಲಾಗಿದೆ. ಈ ವೇಳೆ ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.