ಉಡುಪಿ ಜಿಲ್ಲಿಯಲ್ಲಿ ಸೋಮವಾರ 14 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಫೆ.22: ಸೋಮವಾರ ಜಿಲ್ಲೆಯ 14 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 12 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 53 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ಆರು ಮಂದಿ ಪುರುಷರಾದರೆ ಎಂಟು ಮಂದಿ ಮಹಿಳೆಯರು. ಇವರಲಿ್ಲ ಐವರು ಉಡುಪಿ ತಾಲೂಕಿನವರಾದರೆ,ಒಬ್ಬರು ಕುಂದಾಪುರ ಹಾಗೂ ಏಳು ಇಬ್ಬರು ಕಾರ್ಕಳ ತಾಲೂಕಿನವರು. ಒಬ್ಬರು ಮಾತ್ರ ಹೊರಜಿಲ್ಲೆಯಿಂದ ಚಿಕಿತ್ಸೆಗೆ ಬಂದವರು. ರವಿವಾರ 12 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 23,296ಕ್ಕೇರಿದೆ.
1067 ಮಂದಿ ನೆಗೆಟಿವ್: ರವಿವಾರ ಜಿಲ್ಲೆಯ 1067 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1067 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 12 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,538ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,59,039 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,35,501 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ಗೆ ಒಟ್ಟು 189 ಮಂದಿ ಬಲಿಯಾಗಿದ್ದಾರೆ.