ಕಡಬ: ಕೋಟೆಸಾರು ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಕಡಬ, ಫೆ.23: ಕಡಬ ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕೋಟೆಸಾರು ಹೊಳೆಯಲ್ಲಿ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮೃತದೇಹವೊಂದು ಮಂಗಳವಾರ ಪತ್ತೆಯಾಗಿದೆ.
ಮೃತದೇಹದ ಕೈಯಲ್ಲಿ ಕನ್ನಡಕ ಹಾಗೂ ಅಲ್ಲೇ ಸಮೀಪ ಚಪ್ಪಲಿ ಪತ್ತೆಯಾಗಿದೆ. ಇಂದು ಬೆಳಗ್ಗೆ ಯಾವುದೋ ಕಾರಣಕ್ಕಾಗಿ ಹೊಳೆಗೆ ಇಳಿದ ವೇಳೆ ಕಾಲು ಜಾರಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಕಡಬ ಎಸ್ಸೈ ರುಕ್ಮನಾಯ್ಕ್ ಸ್ವತಃ ನೀರಿಗೆ ಇಳಿದು ಊರವರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ದೇರಳಕಟ್ಟೆ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
Next Story