ಉಡುಪಿ ಜಿಲ್ಲೆಯ 12 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ
ಉಡುಪಿ, ಫೆ. 23: ಜಿಲ್ಲೆಯ 12 ಮಂದಿಯಲ್ಲಿ ಮಂಗಳವಾರ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ ಐವರು ಸೋಂಕಿನಿಂದ ಗುಣಮುಖ ರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 60ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ತಲಾ ಆರು ಮಂದಿ ಪುರುಷರು ಹಾಗೂ ಮಹಿಳೆ ಯರಾಗಿದ್ದಾರೆ. ಇವರಲ್ಲಿ ಒಂಭತ್ತು ಮಂದಿ ಉಡುಪಿ ತಾಲೂಕಿ ನವರಾದರೆ, ತಲಾ ಒಬ್ಬರು ಕುಂದಾಪುರ, ಕಾರ್ಕಳ ತಾಲೂಕು ಹಾಗೂ ಹೊರಜಿಲ್ಲೆಯಿಂದ ಚಿಕಿತ್ಸೆಗೆ ಬಂದವರಾಗಿದ್ದಾರೆ. ಸೋಮವಾರ 5 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ ಈಗ 23,301ಕ್ಕೇರಿದೆ.
1355 ಮಂದಿ ನೆಗೆಟಿವ್: ಸೋಮವಾರ ಜಿಲ್ಲೆಯ 1367 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1355 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 12 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,550 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,60,409 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,36,856 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್ಗೆ (ಒಟ್ಟು ಬಲಿ 189) ಯಾರೂ ಬಲಿಯಾಗಿಲ್ಲ.