ಫೆ. 26ಕ್ಕೆ ಸಚಿವ ನಾರಾಯಣ ಗೌಡ ಉಡುಪಿಗೆ
ಉಡುಪಿ, ಫೆ. 24: ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ, ಫೆ.26ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಅಪರಾಹ್ನ 2:30ಕ್ಕೆ ಕಾಪು ತಾಲೂಕು ಮಟ್ಟಾರಿನಲ್ಲಿ ನಡೆಯುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನು ದಾನ ಬಳಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಬಳಿಕ 5:45ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ನಂತರ ಮಂಗಳೂರಿಗೆ ತೆರಳುವರು.
Next Story