ಫೆ.28ರಂದು ಉಡುಪಿ ಜಿಲ್ಲೆಯ 11 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ
ಉಡುಪಿ, ಫೆ.25: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕರು/ ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಫೆ.28ರಂದು ಉಡುಪಿ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಈ ಪರೀಕ್ಷೆಗೆ ಹಾಜರಾಗಲಿರುವ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಪ್ರಾರಂಭ ಗೊಳ್ಳುವ ಒಂದು ಗಂಟೆ ಮುಂಚಿತ ವಾಗಿ ಹಾಜರಾಗಬೇಕು. ಅಲ್ಲದೇ ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪರೀಕ್ಷಾ ಕೇಂದ್ರದ ಆವರಣ ದಲ್ಲಿ ಮೊಬೈಲ್ ಫೋನ್ ಹಾಗೂ ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವಂತಿಲ್ಲ. ಅಲ್ಲದೇ ಅವುಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಫೆ.28ರಂದು ನಡಯುವ ಪರೀಕ್ಷೆಯ ಪರಿಷ್ಕೃತ ಪ್ರವೇಶ ಪತ್ರವನ್ನು ಕೆಪಿಎಸ್ಸಿ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳು ವಂತೆ ಸೂಚಿಸಲಾಗಿದೆ. ಜ.24ರ ಪ್ರವೇಶ ಪತ್ರಗಳನ್ನು ಫೆ.28ರ ಪರೀಕ್ಷೆಗೆ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story