ದ.ಕ. ಜಿಲ್ಲೆ : 21 ಮಂದಿಗೆ ಕೊರೋನ ಸೋಂಕು
ಮಂಗಳೂರು, ಫೆ.27: ದ.ಕ. ಜಿಲ್ಲೆಯಲ್ಲಿ 21 ಮಂದಿ ಕೊರೋನ ಸೋಂಕು ತಗುಲಿದ್ದು, 26 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 34,417 ಸೋಂಕಿತರ ಪೈಕಿ 33,475 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 740 ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 202 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 34,573 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 35,64,710 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story