ಕೋಟ : ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಕೋಟ: ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಬೈಕ್ ಸವಾರ ಕೋಟ ಬನ್ನಾಡಿಯ ಸುಭಾಷ್ ಅಮೀನ್ (45) ಎಂದು ಗುರುತಿಸಲಾಗಿದೆ. ಇವರು ಸಿವಿಲ್ ಕಾಂಟ್ರಾಕ್ಟ್ ರಾಗಿದ್ದು, ಕೆಲಸಕ್ಕಾಗಿ ಬನ್ನಾಡಿಯಿಂದ ಉಡುಪಿ ಕಡೆ ಹೋಗುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ, ಮಗು ಮತ್ತು ತಾಯಿಯನ್ನು ಅಗಲಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story