ದ.ಕ.ಜಿಲ್ಲೆ: ರವಿವಾರ 24 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಫೆ.28: ದ.ಕ.ಜಿಲ್ಲೆಯಲ್ಲಿ ರವಿವಾರ 24 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 34,441 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ರವಿವಾರ 17ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೆ 33,492 ಮಂದಿ ಕೊರೋನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 209 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 738 ಮಂದಿ ಮೃತಪಟ್ಟಿದ್ದಾರೆ.
Next Story