ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಕರೆನ್ಸಿ ವಶ
ಮಂಗಳೂರು, ಮಾ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನೊಬ್ಬನಿಂದ ಸೋಮವಾರ 5,52,678 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ.
ಹೊನ್ನಾವರ ಮೂಲದ ವ್ಯಕ್ತಿ ಈ ಕರೆನ್ಸಿಗಳನ್ನು ವಿದೇಶಕ್ಕೆ ಕಳ್ಳಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಿ ನೋಟುಗಳ ಕಳ್ಳಸಾಗಣೆಗೆ ಸಂಬಂಧಿಸಿ ಇತ್ತೀಚಿನ ದಿನಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳು ದಾಖಲಿಸಿದ ಮೊದಲ ಪ್ರಕರಣ ಇದಾಗಿದೆ.
Next Story