ಕಾಸರಗೋಡು : ಇಂಧನ ಬೆಲೆ ಏರಿಕೆ ವಿರೋಧಿಸಿ ಮುಷ್ಕರ
ಕಾಸರಗೋಡು : ಇಂಧನ ಬೆಲೆ ಏರಿಕೆ ವಿರೋಧಿಸಿ ಮೋಟಾರ್ ಮಾಲಕರ ಹಾಗೂ ಕಾರ್ಮಿಕರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.
ಇಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಮುಷ್ಕರ ನಡೆಯುತ್ತಿದ್ದು, ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಆಟೋ - ಟ್ಯಾಕ್ಸಿ ಕೂಡಾ ಮುಷ್ಕರದಲ್ಲಿ ಭಾಗಿಯಾಗಿದ್ದು , ಅಂಗಡಿ ಮುಂಗಟ್ಟುಗಳು ಬಹುತೇಕ ಮುಚ್ಚಿವೆ. ಬಿಜೆಪಿ ಬೆಂಬಲಿತ ಬಿಎಂಎಸ್ ಸಂಘಟನೆ ಹೊರತುಪಡಿಸಿ ಉಳಿದೆಲ್ಲಾ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಂಡಿವೆ.
ಖಾಸಗಿ, ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಸಂಪೂರ್ಣ ಮೊಟಕುಗೊಂಡಿವೆ. ಮುಷ್ಕರದ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ , ಹೈಯರ್ ಸೆಕಂಡರಿ ಹಾಗೂ ವಿಶ್ವವಿದ್ಯಾನಿಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.
Next Story