ಮಂಗಳೂರು ವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟ: ಸತತ 19ನೇ ಬಾರಿ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಡಾ ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಹಭಾಗಿತ್ವದಲ್ಲಿ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 195 ಅಂಕ ಹಾಗೂ ಮಹಿಳೆಯರ ವಿಭಾಗದಲ್ಲಿ ಒಟ್ಟು 190 ಅಂಕ ಹಾಗೂ 385 ಅಂಕಗಳೊಂದಿಗೆ ಸತತ 19 ವರ್ಷಗಳಿಂದ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತದೆ.
ಈ ಕ್ರೀಡಾಕೂಟದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಯನ್ನು ಪುರುಷರ ವಿಭಾಗದಲ್ಲಿ ಆಳ್ವಾಸ್ ಮಹಾಂತೇಶ್.ಎಸ್.ಎಚ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
Next Story