ಉಡುಪಿ: ಏಳು ಮಂದಿಯಲ್ಲಿ ಕೊರೋನ ಪಾಸಿಟಿವ್
ಉಡುಪಿ, ಮಾ.4: ಜಿಲ್ಲೆಯಲ್ಲಿ ಗುರುವಾರ ಒಟ್ಟು ಏಳು ಮಂದಿ ಕೋವಿಡ್ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 9 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆಯೂ ಈಗ 73 ಆಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.
ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರಾದರೆ ಮೂವರು ಮಹಿಳೆಯರು. ಇವರಲ್ಲಿ ಐವರು ಉಡುಪಿ ತಾಲೂಕಿನವರು ಹಾಗೂ ಇಬ್ಬರು ಕಾರ್ಕಳ ತಾಲೂಕಿನವರು. ಬುಧವಾರ 9 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ ಈಗ 23,388ಕ್ಕೇರಿದೆ.
1361 ಮಂದಿ ನೆಗೆಟಿವ್: ಬುಧವಾರ ಜಿಲ್ಲೆಯ 1372 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1361 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 11 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,651 ಆಗಿದೆ ಎಂದು ಡಿಎಚ್ಓ ಡಾ.ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ಸಹ ಕೋವಿಡ್ಗೆ ಯಾರೂ ಬಲಿಯಾಗಿಲ್ಲ. ಕೋವಿಡ್ನಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 190 ಆಗಿದೆ.