ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿ ವೇತನ - ಅರ್ಜಿ ಆಹ್ವಾನ
ಮಂಗಳೂರು, ಮಾ.5: ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ವೆಬ್ಸೈಟ್ www.ssp.postmatric.karnataka.gov.in ನಲ್ಲಿ ಮಾರ್ಚ್ 20 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರಸ್ತೆ, ಬಿಜೈ-ಕಾಪಿಕಾಡ್, ಮಂಗಳೂರು-4, ದೂ.ಸಂ: 0824-2225078 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story