ಸಹಾಯಕ ಅಭಿಯಂತರ ಸೇವೆಗೆ ಅರ್ಜಿ ಆಹ್ವಾನ
ಮಂಗಳೂರು, ಮಾ.5: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಕಚೇರಿಗೆ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಪಟ್ಟ ಕೆಲಸ ನಿರ್ವಹಣೆಗೆ ಪ್ರತೀ ಕಚೇರಿಗೆ ತಲಾ 2 ಹುದ್ದೆಯಂತೆ ಒಟ್ಟು 12 ಹುದ್ದೆಗೆ ನಿವೃತ್ತ ಸಹಾಯಕ ಅಭಿಯಂತರ ಸೇವೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story