ಗುರುವಾಯನಕೆರೆಯಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ
ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆಯ ಪ್ರಯಾಣಿಕರ ತಂಗುದಾಣದಲ್ಲಿ ಸುಮಾರು 50 ರಿಂದ 60 ವರ್ಷ ಪ್ರಾಯದ ಅಪರಿಚಿತ ವೃದ್ದನ ಮೃತದೇಹ ಶುಕ್ರವಾರ ಪತ್ತೆಯಾಗಿದೆ.
ಯಾವುದೋ ಖಾಯಿಲೆ ಅಥವಾ ಇನ್ನಿತರ ಕಾರಣದಿಂದ ಮಲಗಿದಲ್ಲಿಯೇ ಮೃತಪಟ್ಟಿರುವಂತೆ ಕಂಡು ಬಂದಿದೆ. ಈ ಬಗ್ಗೆ ಕುವೆಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಪ್ರಸಾದ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.
Next Story