ಮಾ. 8ರಿಂದ ಚಂದನ ವಾಹಿನಿಯಲ್ಲಿ ಎಸ್ಸಿಎಸ್ಪಿ ಟಿಎಸ್ಪಿ ಕಾರ್ಯಕ್ರಮ
ಉಡುಪಿ, ಮಾ.6: ಸಮಾಜ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ಅನುಷ್ಟಾನಗೊಳ್ಳುತ್ತಿರುವ ಎಸ್ಸಿಎಸ್ಪಿ ಟಿಎಸ್ಪಿ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ರಾಜ್ಯ ಮಟ್ಟದ ಸಮಾಜ ಕಲ್ಯಾಣ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಮಾ.8ರಿಂದ ಸಂಜೆ 7:30ರಿಂದ 8:30ರವರೆಗೆ ಪ್ರತಿ ಸೋಮವಾರದಿಂದ ಗುರುವಾರದವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಾಯೋಜಿತ ಕಾರ್ಯಕ್ರಮ ನೀಡಲಿದ್ದು, ಸಾರ್ವಜನಿಕರು ಇದನ್ನು ವೀಕ್ಷಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story