ದ.ಕ. ಜಿಲ್ಲೆ : 16 ಮಂದಿಗೆ ಕೋವಿಡ್ ಸೋಂಕು
ಮಂಗಳೂರು, ಮಾ.7: ದ.ಕ. ಜಿಲ್ಲೆಯಲ್ಲಿ ರವಿವಾರ 16 ಮಂದಿಗೆ ಕೊರೋನ ಸೋಂಕು ತಗುಲಿದ್ದು, 14 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 34,569 ಸೋಂಕಿತರ ಪೈಕಿ 33,604 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 740 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 225 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 35,657 ಮಾಸ್ಕ್ ಉಲ್ಲಂಘನೆ ಪ್ರಕರಣ ಗಳು ಪತ್ತೆಯಾಗಿದ್ದು, 36,72,210 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story