ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪ ಸಾಬೀತು
ಉಡುಪಿ, ಮಾ.8: ಆರು ವರ್ಷಗಳ ಹಿಂದೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾ ಲಯದ ದೋಷಿ ಎಂಬುದಾಗಿ ಘೋಷಿಸಿ ಆದೇಶ ನೀಡಿದೆ.
ಆರೋಪಿಯನ್ನು ಶೇಕ್ ಮಹಮ್ಮದ್ ಶಕೀಲ್ ಎಂದು ಗುರುತಿಸ ಲಾಗಿದೆ. ಈತ 2014ರಲ್ಲಿ ಯುವತಿಯನ್ನು ತನ್ನ ಕಾರಿನಲ್ಲಿ ಅಪಹರಿಸಿ ಆಕೆ ಮೇಲೆ ಮಣಿಪಾಲ ಸಮೀಪ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಕಾಪುವಿನ ತನ್ನ ಮನೆಯಲ್ಲಿ ಕೂಡಿಹಾಕಿದ್ದನು. ಸಂತ್ರಸ್ತೆ ತಂದೆ ಮಗಳು ನಾಪತ್ತೆ ಯಾಗಿರುವುದಾಗಿ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅಂದಿನ ಎಸ್ಸೈ ಗಿರೀಶ್ ಆರೋಪಿಯನ್ನು ಬಂಧಿಸಿದ್ದು ವೃತ್ತ ನಿರೀಕ್ಷಕ ಅರುಣ್ ಬಿ.ನಾಯಕ್ ದೋಷಾರೋಪಣಾ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿ ದ್ದರು. 27 ಮಂದಿ ಸಾಕ್ಷಿಗಳ ಪೈಕಿ 13 ಸಾಕ್ಷಿ ವಿಚಾರಣೆ ನಡೆದಿದ್ದು, ಆತನ ಮೇಲಿನ ಆರೋಪ ಸಾಬೀತಾಗಿರುವುದರಿಂದ ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್, ಆರೋಪಿಯನ್ನು ದೋಷಿ ಎಂಬುದಾಗಿ ಘೋಷಿಸಿ, 15 ಸಾವಿರ ದಂಡ ರೂ. ವಿಧಿಸಿದರು. ಇದರಲ್ಲಿ 5 ಸಾವಿರ ರೂ. ಸರಕಾರಕ್ಕೆ, 10 ಸಾವಿರ ರೂ. ಸಂತ್ರಸ್ತೆಗೆ ನೀಡಲು ಆದೇಶಿಸಿದೆ. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ವಾದ ಮಂಡಿಸಿದ್ದರು