ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಹಿರಿಯಡ್ಕ, ಮಾ.23: ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 169ಎ ಇದರ ಪುತ್ತಿಗೆ ಇಳಿಜಾರು ರಸ್ತೆಯಲ್ಲಿ ಮಾ.22ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಸವಾರ ಶರಣ್ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರಿಣಿ ಉಷಾ ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಿರಿಯಡ್ಕ ಕಡೆಯಿಂದ ಪೆರ್ಡೂರು ಕಡೆಗೆ ಹೋಗುತ್ತಿದ್ದ ಬೈಕ್, ಎದುರಿನ ಕಾರನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ ತೀರಾ ಬಲಭಾಗಕ್ಕೆ ಬಂದು ಬಸ್ಸಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯ ಗೊಂಡಿದ್ದು, ಇದರಲ್ಲಿ ಗಂಭೀರವಾಗಿ ಗಾಯಗೊಂಡ ಶರಣ್, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story