ಉಪ ಚುನಾವಣೆ: ವೇತನ ಸಹಿತ ರಜೆ
ಉಡುಪಿ, ಮಾ.26: ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಮಾ.29ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಪಂನ ಮತ ಕ್ಷೇತ್ರಗಳಲ್ಲಿನ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳ, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳ, ಎಲ್ಲಾ ಶೈಕ್ಷಣಿಕ ಸಂಸ್ಥೆಗಳ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳ, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ಗಳ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳ, ಉಳಿದ ಕೈಗಾರಿಕಾ ಸಂಸ್ಥೆಗಳ ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಶ್ಮೆಂಟ್ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಮಾ. 29 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
Next Story