ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ
ಮಂಗಳೂರು: ನಗರದ ಸ್ಟರಕ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿರುವ ಫ್ಲ್ಯಾಟ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಅಪಾರ್ಟ್ ಮೆಂಟ್ ನ ಎರಡನೇ ಅಂತಸ್ತಿನ ಫ್ಲ್ಯಾಟ್ ನಲ್ಲಿ ವಿದ್ಯಾರ್ಥಿಗಳು ವಾಸ್ತವ್ಯವಿದ್ದರು. ಶನಿವಾರ ರಾತ್ರಿ ಫ್ಲ್ಯಾಟ್ ನಲ್ಲಿರುವ ಫ್ರಿಡ್ಜ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಪಾರ್ಟ್ ಮೆಂಟ್ ನಿವಾಸಿಗಳು ಪಾಂಡೇಶ್ವರ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story