ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗಾಗಿ ಮುಸ್ಲಿಂ ಸೆಂಟ್ರಲ್ ಕಮಿಟಿ ಮನವಿ
ಮಂಗಳೂರು, ಎ.7: ಈ ತಿಂಗಳ ಎರಡನೆ ವಾರ ರಮಝಾನ್ ಉಪವಾಸವು ಆರಂಭಗೊಳ್ಳಲಿದ್ದು, ರಾತ್ರಿ ಎಲ್ಲಾ ಮಸೀದಿಗಳಲ್ಲಿ ತರಾವೀಹ್ ನಮಾಝ್ ನಡೆಯಲಿರುವುದರಿಂದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಬುಧವಾರ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ.
ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳು, ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ಗೆ ಮನವಿ ಸಲ್ಲಿಸಿದ ನಿಯೋಗದಲ್ಲಿ ಕಮಿಟಿಯ ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಹಾಜಿ ಮುಹಮ್ಮದ್ ಬಪ್ಷಳಿಗೆ, ಮೊಯ್ದಿನ್ ಮೋನು ಹಾಜರಿದ್ದರು.
Next Story