ಗುರುಕಂಬಳ: ವೌಲಾನಾ ಆಝಾದ್ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ
ಮಂಗಳೂರು, ಎ.7: ಮಂಗಳೂರು ತಾಲೂಕಿನ ಗುರುಕಂಬಳದಲ್ಲಿ 2.35 ಕೋ.ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೌಲಾನಾ ಆಝಾದ್ ಮಾದರಿ ಇಂಗ್ಲಿಷ್ ಮೀಡಿಯಂ ಶಾಲೆಯ ನೂತನ ಕಟ್ಟಡಕ್ಕೆ ಬುಧವಾರ ಶಾಸಕ ಡಾ.ವೈ.ಭರತ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ರಾಷ್ಟ್ರೀಯ ಮೌಲ್ಯಗಳನ್ನು ಕಲಿಸಿ, ಮಕ್ಕಳಲ್ಲಿ ರಾಷ್ಟ್ರೀಯ ಪರ ಚಿಂತನೆ ಮೂಡಿಸುವ ಕಾರ್ಯ ಶಾಲೆಗಳಿಂದ ಆಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸೇರಿ ವಿದ್ಯಾರ್ಥಿಗಳಿಗೆ ಅಂತಹ ಶಿಕ್ಷಣ ಸಿಗಲು ಪ್ರಯತ್ನಿಸಬೇಕು. ರಾಷ್ಟ್ರಭಕ್ತರನ್ನು ಸಮಾಜಕ್ಕೆ ನೀಡುವ ಕಾರ್ಯ ದಲ್ಲಿ ಶಿಕ್ಷಕರು, ಪೋಷಕರು, ಜನಪ್ರತಿನಿಧಿಗಳು ಕೈ ಜೋಡಿಸಬೇಕು ಎಂದು ಹೇಳಿದರು. ಈ ಸಂದರ್ಭ ಗ್ರಾಪಂ ಅಧ್ಯಕ್ಷೆ ಅಮಿತಾ ಶೆಟ್ಟಿ ಪೆರಾರ ಮತ್ತಿತರರು ಉಪಸ್ಥಿತರಿದ್ದರು.
Next Story