ಎಕ್ಕೂರಿನಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು
ಮಂಗಳೂರು, ಎ.14: ಕಾರು ಮತ್ತು ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಬಸ್ಸಿನಡಿಗೆ ಬಿದ್ದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಗಾಯಾಳುವನ್ನು ಅತ್ತಾವರ ನಿವಾಸಿ ಧೀಮಂತ್(30) ಎಂದು ಗುರುತಿಸಲಾಗಿದೆ. ಇವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಧೀಮಂತ್ ಅವರು ಹಿಂದಿನಿಂದ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರೆನ್ನಲಾಗಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story