ಹೊಸಂಗಡಿ: ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಮಂಜೇಶ್ವರ, ಎ.19: ಬಸ್ಸು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆದಿದೆ.
ಪೈವಳಿಕೆ ಬೀಡುಬೈಲ್ ನ ಶಶಿಧರ (26) ಮೃತಪಟ್ಟವರು. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ತಲಪಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಬಸ್ಸು ಢಿಕ್ಕಿ ಹೊಡೆದಿದ್ದು, ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಶಿಧರರನ್ನು ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಅವರು ಮೃತಪಟ್ಟಿದ್ದರು.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Next Story