ದ.ಕ. ಜಿಲ್ಲೆಯಲ್ಲಿ ಮಂಗಳವಾರ 482 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಎ.20: ದ.ಕ.ಜಿಲ್ಲೆಯಲ್ಲಿ ಮಂಗಳವಾರ 482 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 38,843 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ಮಂಗಳವಾರ 88 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 35,824 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಅಲ್ಲದೆ ಒಟ್ಟು 744 ಮಂದಿ ಕೊರೋನದಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 6,92,680 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,53,837 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 2275 ಸಕ್ರಿಯ ಪ್ರಕರಣವಿದೆ.
ಎ.1ರಂದು ಕೋವಿಡ್ ಪಾಸಿಟಿವ್ನ ಸಂಖ್ಯೆ ಕೇವಲ 30 ಇದ್ದರೆ, ಎ.10ಕ್ಕೆ 137 ಪ್ರಕರಣ ಕಂಡು ಬಂದಿತ್ತು. ಇದೀಗ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಲೇ ಇದ್ದು, ಜಿಲ್ಲಾಡಳಿತ, ಆರೋಗ್ಯ ಮತ್ತು ಕಂದಾಯ ಸಹಿತ ಪೊಲೀಸ್ ಇಲಾಖೆಗೆ ಇದು ಸವಾಲಾಗಿ ಪರಿಣಮಿಸಿದೆ.
ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 46,501 ಪ್ರಕರಣ ದಾಖಲಿಸಿ, 48,25,830 ರೂ. ದಂಡ ವಸೂಲಿ ಮಾಡಲಾಗಿದೆ.