ಐಷಾರಾಮಿ ಕಾರು ಮಾರಾಟ ಪ್ರಕರಣ : ಆರೋಪಿ ವಶಕ್ಕೆ
ಮಂಗಳೂರು, ಎ. 22: ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರ ವಶದಲ್ಲಿದ್ದ ಜಾಗ್ವರ್ ಕಾರು ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಕದ್ರಿ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಫಳ್ನೀರ್ ನಿವಾಸಿ ದಿವ್ಯದರ್ಶನ (33) ಪೊಲೀಸರ ವಶದಲ್ಲಿರುವ ಆರೋಪಿ ಎನ್ನಲಾಗಿದೆ.
ಈತ ಮತ್ತು ವ್ಯಕ್ತಿಯೊಬ್ಬರ ಮಧ್ಯೆ ಜಾಗ್ವರ್ ಕಾರು ಮಾರಾಟ ವ್ಯವಹಾರ ನಡೆದಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡ ಕದ್ರಿ ಪೊಲೀಸರು ಗುರುವಾರ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story