ಸುಳ್ಯ: ಕೊರೋನ ಸೋಂಕಿಗೆ ಯುವಕ ಬಲಿ
ಸುಳ್ಯ: ಏ28. ಕೊರೋನ ಸೋಂಕಿನಿಂದ ಬಳಲುತ್ತಿದ್ದ ಸಂಪಾಜೆ ಗ್ರಾಮದ ಕೋಯನಾಡು ಕುಂದಲ್ಪಾಡಿಯ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ 30ರ ಹರೆಯದ ಯುವಕ ಇತ್ತೀಚೆಗೆ ಊರಿಗೆ ಮರಳಿದ್ದರು. ಕೊರೋನ ಸೋಂಕು ಹಿನ್ನೆಲೆಯಲ್ಲಿ ಅವರು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
Next Story