ಕೋವಿಡ್ ಕರ್ಫ್ಯೂ: ಕಾಪು ಪುರಸಭೆ, ತಾಪಂ ಸಭೆ ಮುಂದೂಡಿಕೆ
ಕಾಪು : ಕೋವಿಡ್ ಕರ್ಫ್ಯೂ ಹಿನ್ನಲೆಯಲ್ಲಿ ಕಾಪು ಪುರಸಭೆ ಹಾಗು ತಾಲ್ಲೂಕು ಪಂಚಾಯಿತಿ ಸಭೆಯನ್ನು ಮುಂದೂಡಲಾಗಿದೆ.
ಕಾಪು ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯನ್ನು ಎಪ್ರಿಲ್ 28ಕ್ಕೆ ಕಾಪು ಪುರಸಭೆಯ ಸಾಮಾನ್ಯ ಸಭೆಯನ್ನು ಎಪ್ರಿಲ್ 29ರಂದು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ ಕರ್ಫ್ಯೂ ಹಿನ್ನಲೆಯಲ್ಲಿ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ. ತಾಲ್ಲೂಕು ಪಂಚಾಯಿತಿ ಮೇ ತಿಂಗಳಲ್ಲಿ ಅವಧಿ ಪೂರ್ಣಗೊಳ್ಳಲಿದೆ. ಕಾಪು ಪುರಸಭೆಯ ಅವಧಿಯೂ ಬಹುತೇಕ ಜುಲೈ ತಿಂಗಳಲ್ಲಿ ಪೂರ್ಣಗೊಳ್ಳಲಿದೆ.
Next Story