ಕೇರಳ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ
ಕಾಸರಗೋಡು : ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಇಂದು ಬೆಳಗ್ಗೆ ಆರಂಭಗೊಳ್ಳಲಿದೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ನಡೆಯಲಿದ್ದು, ಸಂಜೆಯೊಳಗೆ ಪೂರ್ಣ ಫಲಿತಾಂಶ ಸಿಗಲಿದೆ. ಜಿಲ್ಲೆಯ ಮಂಜೇಶ್ವರ, ಕಾಸರಗೋಡು, ಉದುಮ, ಕಾಞಂಗಾಡ್, ತ್ರಿಕ್ಕರಿಪುರ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಮಂಜೇಶ್ವರ, ಕಾಸರಗೋಡು ಮತ್ತು ಉದುಮದಲ್ಲಿ ಬಿಗ್ ಫೈಟ್ ನಡೆಯಲಿದೆ. ಮಂಜೇಶ್ವರ ಮತ್ತು ಕಾಸರಗೋಡಿನಲ್ಲಿ ಯುಡಿಎಫ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಉದುಮದಲ್ಲಿ ಯುಡಿಎಫ್ ಮತ್ತು ಎಲ್ ಡಿ ಎಫ್ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
Next Story