ಹಿಟ್ ಆ್ಯಂಡ್ ರನ್: ಪಾದಚಾರಿ ಮೃತ್ಯು
ಕುಂದಾಪುರ, ಮೇ 18: ಕುಂದಾಪುರ ಶಾಸ್ತ್ರಿ ಸರ್ಕಲ್ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ 17ರಂದು ಸಂಜೆ 7ಗಂಟೆ ಸುಮಾರಿಗೆ ನಡೆದಿದೆ.
ತಲ್ಲೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ವೊಂದು ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಉಡುಪಿ ಕಡೆಗೆ ಪರಾರಿಯಾಯಿತು. ಈ ಅಪಘಾತ ದಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರೆನ್ನ ಲಾಗಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story