Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಸ್ಕ್ ಧರಿಸಲು ವಿರೋಧ: ಡಾ.ಶ್ರೀನಿವಾಸ...

ಮಾಸ್ಕ್ ಧರಿಸಲು ವಿರೋಧ: ಡಾ.ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ19 May 2021 6:17 PM IST
share
ಮಾಸ್ಕ್ ಧರಿಸಲು ವಿರೋಧ: ಡಾ.ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಮೇ 19: ನಗರದ ಸೂಪರ್ ಬಝಾರೊಂದರಲ್ಲಿ ಖರೀದಿಗೆ ಹೋಗಿದ್ದ ಸಂದರ್ಭ ನಗರದ ಖ್ಯಾತ ವೈದ್ಯರೊಬ್ಬರು ಮಾಸ್ಕ್ ಧರಿಸಲು ವಿರೋಧಿಸಿ, ಸಿಬ್ಬಂದಿ ಜತೆ ವಾಗ್ವಾದ ನಡೆಸಿದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮದಲ್ಲಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

‘‘ಸಾಮಾಜಿಕ ಜಾಲತಾಣಗಳಲ್ಲಿ ಇಂದು ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧದ ವೀಡಿಯೋವೊಂದು ವೈರಲ್ ಆಗಿದೆ. ಡಾ. ಕಕ್ಕಿಲ್ಲಾಯರು ನಗರದ ಸೂಪರ್ ಬಝಾರೊಂದರಲ್ಲಿ ಖರೀದಿ ಸಂದರ್ಭ ಮಾಸ್ಕ್ ಧರಿಸದೆ, ಅಲ್ಲಿನ ಸಿಬ್ಬಂದಿ ಮಾಸ್ಕ್ ಧರಿಸಲು ವಿನಂತಿಸಿದಾಗ ವಿರೋಧಿಸಿದ್ದಾರೆ. ಈ ಕುರಿತು ಆ ಸೂಪರ್ ಬಝಾರ್‌ನ ಮಾಲಕರು ನೀಡಿರುವ ದೂರಿನಂತೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’’ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಮೇ 18ರಂದು ಬೆಳಗ್ಗೆ ಕದ್ರಿಯ ಸೂಪರ್ ಮಾರುಕಟ್ಟೆಯಲ್ಲಿ ಡಾ. ಶ್ರೀನಿವಾಸ ಕಕ್ಕಿಲ್ಲಾಯರು ಖರೀದಿಗೆ ಹೋಗಿದ್ದಾಗ ಮಾಸ್ಕ್ ಧರಿಸಿರಲಿಲ್ಲ. ಈ ಬಗ್ಗೆ ಕೆಲವು ಗ್ರಾಹಕರು ದೂರಿದ್ದು, ಸಿಬ್ಬಂದಿಯೂ ಮಾಸ್ಕ್ ಧರಿಸಲು ಅವರನ್ನು ವಿನಂತಿಸಿದ್ದಾರೆ. ಆದರೆ ಸರಕಾರ ಮಾಡಿರುವುದು ಮೂರ್ಖತನದ ಕಾನೂನು, ಮಾಸ್ಕ್ ಧರಿಸಬೇಕಾಗಿಲ್ಲ, ಸರಕಾರ ಹೇಳಿದ್ದೆಲ್ಲಾ ಕೇಳುತ್ತಿರಾ ಎಂದು ಅಂಗಡಿಯವರಲ್ಲಿ ವಾದ ಮಾಡಿರುವ ವೀಡಿಯೋ ಒಂದು ಇಂದು ಬೆಳಗ್ಗಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಐಎಂಎ ಮಂಗಳೂರು ಘಟಕದಿಂದ ಖಂಡನೆ
ಡಾ. ಬಿ.ಎಸ್. ಕಕ್ಕಿಲ್ಲಾಯ ಅವರು ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೆ, ಸರಕಾರದ ನಿಯಮಗಳ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿರುವುದನ್ನು ಖಂಡಿಸುವುದಾಗಿ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ಮಾತ್ರವಲ್ಲದೆ, ಶ್ರೀನಿವಾಸ ಕಕ್ಕಿಲ್ಲಾಯರು ನೀಡಿರುವ ಯಾವುದೇ ಹೇಳಿಕೆ ಅಥವಾ ಕ್ರಿಯೆಯನ್ನು ತಾನು ಬೆಂಬಲಿಸುವುದಿಲ್ಲ ಎಂದೂ ಪ್ರಕಟನೆಯಲ್ಲಿ ತಿಳಿಸಿದೆ.

ನಾನೇನೂ ಸೂಪರ್ ಮಾರ್ಕೆಟ್‌ನವರೊಂದಿಗೆ ಚರ್ಚೆ ಮಾಡಿಲ್ಲ. ನಾನು ಜವಾಬ್ಧಾರಿಯುತ ವೈದ್ಯನಾಗಿ ಕೆಲಸ ಮಾಡುವವನು. ನನ್ನಿಂದ ಯಾರಿಗೂ ಕೋವಿಡ್ ಹರಡುವುದಿಲ್ಲ. ನನಗೆ ಈಗಾಗಲೇ ಕೋವಿಡ್ ಬಂದಿದೆ. ಇದನ್ನು ಅವರಿಗೆ ಮನದಟ್ಟು ಮಾಡುವ ಕೆಲಸವಷ್ಟೆ ಮಾಡಿದ್ದೇನೆ. ಸೂಪರ್ ಮಾರ್ಕೆಟ್‌ನವರು ತಮ್ಮ ದೃಶ್ಯಾವಳಿಯನ್ನು ಸೋಶಿಯಲ್ ಮೀಡಿಯಾಕ್ಕೆ ಕೊಟ್ಟಿರುವುದು ಸರಿಯಲ್ಲ. ಅದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ಕಾನೂನನ್ನು ಗೌರವಿಸುವ ವ್ಯಕ್ತಿಯಾಗಿ ಪೊಲೀಸರು ನೀಡಿರುವ ನೊಟೀಸಿಗೆ ಉತ್ತರ ನೀಡಿ ಬಂದಿದ್ದೇನೆ.
-ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಖ್ಯಾತ ವೈದ್ಯರು, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X