ಕಾರು-ಟೆಂಪೋ ಮಧ್ಯೆ ಢಿಕ್ಕಿ: ಇಬ್ಬರಿಗೆ ಗಾಯ
ಮಂಗಳೂರು, ಜೂ.29: ನಗರದ ಲಾಲ್ಭಾಗ್ ಬಳಿ ಕಾರು ಮತ್ತು ಟೆಂಪೋ ನಡುವೆ ಢಿಕ್ಕಿ ಸಂಭವಿಸಿ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ.
ಇಂದು ಸಂಜೆ 5 ಗಂಟೆಯ ಸುಮಾರಿಗೆ ಲಾಲ್ಭಾಗ್ನಿಂದ ಲೇಡಿಹಿಲ್ಗೆ ಹೋಗುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story