ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಮನಪಾ ವ್ಯಾಪ್ತಿಯಲ್ಲಿ 20 ಪ್ರಕರಣ ದಾಖಲು
ಮಂಗಳೂರು, ಜೂ.10: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಮನಪಾ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿ 20 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ 21,800 ರೂ. ದಂಡ ವಿಧಿಸಿದ್ದಾರೆ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಲಾಕ್ಡೌನ್ ವಿಧಿಸಿ ಎರಡು ತಿಂಗಳಾದರೂ ಕೂಡ ಜಿಲ್ಲೆಯಲ್ಲಿ ಅದರಲ್ಲೂ ನಗರದಲ್ಲಿ ಕೋವಿಡ್ ಸೋಂಕು ಮತ್ತು ಸಾವಿನ ಪ್ರಕರಣದಲ್ಲಿ ನಿಯಂತ್ರಣ ಕಂಡು ಬಾರದ ಕಾರಣ ಮನಪಾ ವ್ಯಾಪ್ತಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಮನಪಾ ಆಯುಕ್ತರು ಎಚ್ಚರಿಸಿದ್ದಾರೆ.
Next Story