ದ.ಕ. ಜಿಲ್ಲೆ: ಕೋವಿಡ್ಗೆ 16 ಬಲಿ; 832 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜೂ.19: ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ 16 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,040ಕ್ಕೇರಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ 832 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7.96ಕ್ಕೇರಿದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 88,181ಕ್ಕೇರಿದೆ.
ಶನಿವಾರ 552 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 79,947ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,195 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 9,53,554 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 8,65,372 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 71,438 ಮಂದಿಯಿಂದ 86,52,417 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story