ಉಡುಪಿ: ಜೂ.21ರಂದು 240 ಮನೆಗಳ ಹಂಚಿಕೆ
ಉಡುಪಿ, ಜೂ.19: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದಡಿ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ನಲ್ಲಿ ಜಿ+3 ಮಾದರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 240 ಮನೆಗಳ ಹಂಚಿಕೆ ಜೂ.21ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ನಲ್ಲಿ ನಡೆಯುವ ಈ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ವಹಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಉಪಸ್ಥಿತರಿರುವರು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
Next Story