ಒಳಕಾಡು: 7 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ
ಉಡುಪಿ, ಜೂ.20: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಒಳಕಾಡು ವಾರ್ಡಿನ ಶಾರದಾ ಕಲ್ಯಾಣ ಮಂಟಪ ಬೀಡಿನಗುಡ್ಡೆ ರಸ್ತೆ ಸೇತುವೆ ಬಳಿ 7 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ರವಿವಾರ ಚಾಲನೆ ನೀಡಲಾಯಿತು.
ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಉದ್ಯಮಿ ನಾಗೇಶ್ ಹೆಗ್ಡೆ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಗದ್ದೆಗೆ ಹಾಲನ್ನು ಅರ್ಪಿಸುವ ಮೂಲಕ ಕೈ ನಾಟಿಗೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನಟ್ಟರು.
ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್, ಉದ್ಯಮಿಗಳಾದ ಸಂತೋಷ್ ಶೆಟ್ಟಿ, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್ ಉಪಸ್ಥಿತರಿದ್ದರು.
Next Story